ಉಜಿರೆ: ಧರ್ಮಸ್ಥಳದ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್‌ಶ್ರೀ ಬಾಹುಬಲಿ ಸ್ವಾಮಿಗೆ ಫೆ. 4ರಂದು ಮಂಗಳವಾರ ಕಾರ್ಕಳ ಜೈನ ಮಠದ ಪೂಜ್ಯ ಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರ ನೇತೃತ್ವದಲ್ಲಿ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.
ಮಂಗಳವಾರ ಬೆಳಿಗ್ಗೆ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಯುತ್ತದೆ. ನಂತರ ಕಾರ್ಕಳ ಜೈನಮಠದ ಪೂಜ್ಯ ಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಫೆ.3 ರಂದು ಸೋಮವಾರ ರತ್ನಗಿರಿಯಲ್ಲಿ ವಿಮಾನ ಶುದ್ಧಿ. ತೋರಣ ಮೂಹೂರ್ತ, ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here