

ವಿಟ್ಲ: ಮಾಣಿಲ ಗ್ರಾಮದ ಪಕಳಕುಂಜ ಶ್ರೀವೇಣುಗೋಪಾಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಕರ ಜನ್ಮ ಶತಾಬ್ಧಿ ಅಭಿನಂದನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಶಾಲಾ ಸಂಚಾಲಕ ಪಕಳಕುಂಜ ಗೋಪಾಲಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯದಲ್ಲಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಎಂ. ತಿಮ್ಮಣ್ಣ ಭಟ್ ಅವರನ್ನು ಸನ್ಮಾನಿಸಲಾಯಿತು. ಶ್ಯಾಮ್ ಭಟ್ ಪಕಳಕುಂಜ ಅಭಿನಂದನಾ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಬಾಯಾರು ಪ್ರಶಾಂತಿ ಸೇವಾ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಹೆಚ್. ಮಹಾಲಿಂಗ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಪರಮೇಶ್ವರ ನಾಯ್ಕ, ಶ್ರೀ ಕ್ಷೇತ್ರ ಒಡಿಯೂರು, ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ತಾಲೂಕು ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ರಾಮಚಂದ್ರ ಭಟ್.ಬಿ ನಡುಮನೆ, ಮಾಣಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಟ್ಯಡ್ಕ ವಿಶಾಲಾಕ್ಷಿ, ಪಕಳಕುಂಜ ಶಾಲೆಯ ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷೆ ನಿವೇದಿತಾ ಕೆ.ಭಟ್ ಮಾಣಿಮೂಲೆ ಭಾಗವಹಿಸಿದ್ದರು.
ಸಹ ಶಿಕ್ಷಕಿ ನಿರ್ಮಲಾ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ದಯಾಮಣಿ, ದಿವ್ಯಲಕ್ಷ್ಮೀ, ನವ್ಯ ಶ್ರೀ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.
ಶಾಲಾ ಮುಖ್ಯ ಶಿಕ್ಷಕ ಮದನ್ ಮೋಹನ್ ಶೆಟ್ಟಿ ಎಸ್. ಪಡಿಬಾಗಿಲು ಅಳಿಕೆ ವರದಿ ವಾಚಿಸಿದರು. ಸಹ ಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಮಕ್ಕಳಿಂದ ಶಾಲಾ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯಗಳು, ಶಾಲಾ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನಗೊಂಡಿತು.








