Sunday, October 22, 2023

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು: ರಾಷ್ಟ್ರೀಯ ಮತದಾರ ದಿನಾಚರಣೆ

Must read

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮತದಾರ ಜಾಗೃತಿ ವೇದಿಕೆಯ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಸಹಾಯಕ ಪ್ರಾಧ್ಯಾಪಕ ರೊನಾಲ್ಡ್ ಪ್ರವೀಣ್ ಕೊರೆರಾ ಅವರು ಮಾತನಾಡಿ, ರಾಷ್ಟ್ರೀಯ ಮತದಾರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಯುವ ಮತದಾರರು ಹೆಚ್ಚಿದ್ದು, ಮತದಾನದ ಬಗ್ಗೆ ಇವರಲ್ಲಿ ಜಾಗೃತಿ ಹಾಗೂ ಸೂಕ್ಷ್ಮತೆಯನ್ನು ಮೂಡಿಸಿದರೆ ಚುನಾವಣೆಗಳು ಹಾಗೂ ಅವುಗಳ ತತ್ತ್ವಾದರ್ಶಗಳು ಯಶಸ್ವಿಯಾಗಲಿವೆ ಎಂದರು. ಯುವ ಮತದಾರರು ನಿಷ್ಪಕ್ಷಪಾತವಾಗಿ ಹಾಗೂ ವಿವೇಕದಿಂದ ಮತ ಚಲಾಯಿಸಿದರೆ ರಾಷ್ಟ್ರದ ಭವಿಷ್ಯ ಉಜ್ವಲವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಅವರು ವಿದ್ಯಾರ್ಥಿಗಳಿಗೆ ಮುಂಬರುವ ಚುನಾವಣೆಯಲ್ಲಿ ಅಗತ್ಯವಾಗಿ ಮತದಾನ ಮಾಡಿ ಪ್ರಜಾಪ್ರಭುತ್ವದ ಆಶೋತ್ತರಗಳನ್ನು ಈಡೇರಿಸುವಂತೆ ಕರೆ ನೀಡಿದರು. ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸುವಲ್ಲಿ ಹಾಗೂ ಮತದಾನ ಮಾಡುವಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ತಿಳಿಸಿದರು. ಮತದಾನವು ನಮ್ಮ ಹಕ್ಕು ಹಾಗೂ ಜವಾಬ್ದಾರಿಯೂ ಆಗಿದೆ ಎಂದರು.
ಸಹಾಯಕ ಪ್ರಾಧ್ಯಾಪಕ ಹನುಮಂತಯ್ಯ ಜಿ.ಹೆಚ್. ಅವರು ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞೆಯನ್ನು ಸಭೆಗೆ ಬೋಧಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದೇವಿಪ್ರಸಾದ್ aವರು ಕಾರ್ಯಕ್ರಮವನ್ನು ಸಂಯೋಜಿಸಿದರು. ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಮುನೀರಾ ಬಾನು ಸ್ವಾಗತಿಸಿ, ದ್ವಿತೀಯ ಬಿಎ ವಿದ್ಯಾರ್ಥಿನಿ ಗಾಯತ್ರಿ ವಂದಿಸಿದರು.  ಅತಿಥಿ ಉಪನ್ಯಾಸಕಿ ಸವಿತಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಥಮ ಬಿಎ ವಿದ್ಯಾರ್ಥಿ ಸುಭಾಶ್ ಕೆ.ಎಸ್. ಕಾರ್ಯಕ್ರಮವನ್ನು ನಿರೂಪಿಸಿದರು.

More articles

Latest article