ಬಂಟ್ವಾಳ: ತಾಲೂಕಿನ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಕಂಬಳ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿರುವ ಹಿರಿಯ ಮುತ್ಸದ್ದಿ ಪಟ್ಟೋರಿ ಜೋಗಿಬೆಟ್ಟು ಕುಟುಂಬದ ಯಜಮಾನರೂ ಆಗಿರುವ ಮಿತ್ತಕೋಡಿ‌ ವೆಂಕಪ್ಪ ಕಾಜವ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಮಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಾಜಿ ಉಸ್ತುವಾರಿ ಸಚಿವ ಯು.ಟಿ.ಖಾದರ್, ಶಾಸಕ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿ.ಪಂ ಅಧ್ಯಕ್ಷೆ ಮಿನಾಕ್ಷಿ ಶಾಂತಿಗೋಡು, ದ.ಕ.ಜಿಲ್ಲಾಧಿಕಾರಿ ಸಿಂಧು ರೂಪೇಶ್, ಮಂಗಳೂರು ತಾ.ಪಂ. ಅಧ್ಯಕ್ಷ ಮೊಹಮ್ಮದ್ ಮೋನು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್ ಕಲ್ಕೂರ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here