Saturday, April 6, 2024

ಫೆ.14- ಫೆ.17: ಕಕ್ಯಪದವು ಶ್ರೀ ಕಡಂಬಿಲ್ತಾಯಿ ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಬೈದರ್ಕಳ ಜಾತ್ರೆ

ಬಂಟ್ವಾಳ: ಕಕ್ಯಪದವು ಶ್ರೀ ಕಡಂಬಿಲ್ತಾಯಿ ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದಲ್ಲಿ ಫೆ.14 ಶುಕ್ರವಾರದಿಂದ ಫೆ.17 ಸೋಮವಾರದ ವರೆಗೆ ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ನಡೆಯಲಿದೆ.
ಫೆ.14ರ ಸಂಜೆ 6 ಗಂಟೆಗೆ ಬಾರ್ದಡ್ಡು ಗುತ್ತಿನಿಂದ ಕಡಂಬಿಲ್ತಾಯಿ, ಕೊಡಮಣಿತ್ತಯಿ ದೈವಗಳ ಭಂಡಾರ ಬರುವುದು, ಕಕ್ಯಗುತ್ತಿನಿಂದ ದೈವಂಕುಳ ಭಂಡಾರ ಬಂದು ನವಕಕಲಶ “ಪ್ರಧಾನ ಹೋಮ”, ಧ್ವಜಾರೋಹಣ ಗ್ರಾಮ ಸಂಕ್ರಾತಿ ಸೇವೆ ನಡೆಯಲಿದೆ. ಸಂಜೆ 7ರ ನಂತರ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ಬಳಿಕ ಅನ್ನ ಸಂತರ್ಪಣೆ, ದೈವಂಕುಲ ನೇಮೋತ್ಸವ ನಡೆಯಲಿದೆ.


ಫೆ.15ರ ಸಂಜೆ 6.30ಕ್ಕೆ ಯಕ್ಷಗಾನ ಹಾಸ್ಯ-ನಾಟ್ಯ ವೈಭವ ನಡೆಯಲಿದೆ. ಅನ್ನಸಂತರ್ಪಣೆ ಬಳಿಕ ಕಡಂಬಿಲ್ತಾಯಿ ಕೊಡಮಣಿತ್ತಾಯಿ ದೈವಗಳ ಬಲಿ ಮತ್ತು ನೇಮೋತ್ಸವ ನಡೆಯಲಿದೆ.


ಫೆ16ರ ಸಂಜೆ 7 ರಿಂದ ಧಾರ್ಮಿಕ ಸಭೆ ನಡೆಯಲಿದೆ. ಇದರ ಉದ್ಘಾಟಕರಾಗಿ ಧಾರ್ಮಿಕ ದತ್ತಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಲಿರುವರು. ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಹಲವಾರು ಗಣ್ಯರು ಆಗಮಿಸಲಿರುವರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ನಂತರ ಅನ್ನಸಂತರ್ಪಣೆ. ರಾತ್ರಿ 10.30ಕ್ಕೆ ಬೈದೆರ್‍ ಗಳು ಗರಡಿ ಇಳಿಯುವುದು, ಸುಡುಮದ್ದು ಪ್ರದರ್ಶನ, ಮಾಣಿಬಾಲೆ ನೇಮೋತ್ಸವ ನಡೆದು, ನಂತರ 11.30 ರಿಂದ ವಿದಾತ್ರಿ ಕಲಾವಿದರು ಕೈಕಂಬ ಕುಡ್ಲ ಇವರಿಂದ ಚಲನಚಿತ್ರ ನಟ ರಮೇಶ್ ರೈ ಕುಕ್ಕುವಳ್ಳಿ ಅವರ ನಿರ್ದೇಶನದ ತುಳು ನಾಟಕ ಕುಸಲ್ ಬೊಡ್ಚಿ ನಡೆಯಲಿದೆ.
ಫೆ.17ರ ಬೆಳಿಗ್ಗೆ ಕೊಡಮಣಿತ್ತಯ ಸ್ಥಾನದ ನವಕಕಲಶ ಪ್ರಧಾನ ಹೋಮ ಹೂವಿನ ಪೂಜೆಯ ನಂತರ ಶ್ರೀ ಕೊಡಮಣಿತ್ತಯ ದೈವಗಳ ನೇಮೋತ್ಸವ ನಡೆಯಲಿರುವುದು. ಆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಅಸ್ರಣ್ಣ ರಾಜೇಂದ್ರ ಅರ್ಮುಡ್ತಾಯ ಹಾಗೂ ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ತಿಳಿಸಿದ್ದಾರೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...