ಮಂಗಳೂರು: ಕೇರಳದ ಗಡಿ ಭಾಗವಾದ ಮಂಗಳೂರು, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಹೈ ಅಲರ್ಟ್ ಘೋಷಿಸಿದೆ ಹಾಗು ಇಂತಹ ಸೋಂಕು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಸೋಂಕು ಶಂಕಿತರ ಚಲನ ವಲನಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಪ್ರಕಟಣೆಯೊಂದನ್ನು ಹೊರಡಿಸಿದೆ.
ಕೇರಳದ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿ ಒಬ್ಬನಲ್ಲಿ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಾದ ದ.ಕ., ಕೊಡಗು, ಚಿಕ್ಕಮಗಳೂರು ಮತ್ತು ಮೈಸೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹೈ ಅಲರ್ಟ್ ಘೋಷಿಸಿದೆ.

ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಲ್ಲಿಂದ ಬಂದವರು ಕೆಲವೊಂದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಸೀನುವಾಗ ಮತ್ತು ಕೆಮ್ಮುವಾಗ ಮೂಗು ಹಾಗೂ ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಮನೆಯಲ್ಲಿ 14 ದಿನಗಳು ಪ್ರತ್ಯೇಕವಾಗಿ ಮಲಗಬೇಕು. ಕುಟುಂಬದ ಸದಸ್ಯರು ಹಾಗೂ ಹೊರಗಿನವರೊಂದಿಗೆ ಸಾಧ್ಯವಾದಷ್ಟು ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here