Wednesday, April 10, 2024

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

ಉಜಿರೆ: ಆರುನೂರು ಮಂದಿ ಸಕ್ರಿಯ ಸ್ವಯಂ ಸೇವಕರ ತಂಡ ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ ಉಜಿರೆಯಲ್ಲಿ ಕಳೆದ ಜನವರಿ 21 ರಂದು ಉಜಿರೆ ಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡಿತ್ತು.
ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆಪೀಡಿತರಿಗೆ ಸಂಕಷ್ಟದ ಸಂದರ್ಭ ಅಭಯಹಸ್ತ ನೀಡಿ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರ ತಂಡವನ್ನು ರಚಿಸಿದೆ.


ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾ ಕಾರ್ಯವನ್ನು 500 ಮಂದಿ ಸ್ವಯಂ ಸೇವಕರ ತಂಡದವರು ಪ್ರಥಮ ಸೇವೆಯಾಗಿ ಮಾಡಿದರು.
ಬೆಳಿಗ್ಗೆ ಗಂಟೆ ಹತ್ತರಿಂದ ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ ನಡೆಸಿ 6 ಲೋಡ್ ಬಟ್ಟೆ ತ್ಯಾಜ್ಯ, 2 ಲೋಡ್‌ ಕಟ್ಟಿಗೆ ಹಾಗೂ 8 ಲೋಡ್‌ ತ್ಯಾಜ್ಯ ತೆರವುಗೊಳಿಸಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಭೇಟಿ ನೀಡಿ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಉಜಿರೆಯ ಹಿರಿಯ ಸಮಾಜ ಸೇವಾಕರ್ತ ರಾಮಚಂದ್ರ ಶೆಟ್ಟಿ ಸ್ವಚ್ಛತಾ ಕಾರ್ಯ ಉದ್ಘಾಟಿಸಿದರು.
ಶರತ್‌ ಕೃಷ್ಣ ಪಡ್ವೆಟ್ನಾಯ, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಉಜಿರೆಯ ಉದ್ಯಮಿ ರಾಜೇಶ್ ಪೈ ಹಾಗೂ ಮೋಹನ ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸೇವೆ ನಡೆಯಿತು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...