ಉಜಿರೆ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ನಿನ್ನೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ 1972 ರ ಮೋಡೆಲ್ ಮರ್ಸಿಡಿಸ್ ಬೆನ್ಜ್‌ ಕಾರನ್ನು ಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ.
ಸ್ವಾಮೀಜಿ ಅವರು ಭಾನುವಾರ ಬೆಳಿಗ್ಗೆ ಬೀಡಿನ ಎದುರು (ಹೆಗ್ಗಡೆಯವರ ನಿವಾಸ) ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನು ಕೊಡುಗೆಯಾಗಿ ನೀಡಿದರು.


ಕೆಲವು ವರ್ಷಗಳ ಹಿಂದೆ ಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆ ಅವರು ಸ್ವಾಮೀಜಿ ಅವರನ್ನು ಗೌರವಿಸಿದರು.
ಸ್ವಾಮೀಜಿಯು ರೋಪ್‌ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರೆ ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here