Wednesday, October 18, 2023

ಫೆ.6: ಬಂಟ್ವಾಳ ಸ.ಪ್ರ.ದ. ಕಾಲೇಜಿನಲ್ಲಿ ಬೌದ್ಧಿಕ ಹಕ್ಕುಗಳ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ

Must read

ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಫೆ.6ರಂದು ಬೌದ್ಧಿಕ ಹಕ್ಕುಗಳ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಬಂಟ್ವಾಳ ರೋಟರಿ ಕ್ಲಬ್, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಪ್ಯಾರಾಲೀಗಲ್ ಸೆಲ್ ಇವುಗಳ ಸಹಯೋಗದಲ್ಲಿ ಬಿ.ಸಿ. ರೋಡಿನ ರೋಟರಿ ಸಭಾಭವನದಲ್ಲಿ ನಡೆಯುವ ಈ ವಿಚಾರ ಸಂಕಿರಣದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ವಿದ್ವಾಂಸರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಡಾ. ಗಿರೀಶ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More articles

Latest article