ವಿಟ್ಲ: ಅಳಿಕೆ  ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಕೃತಜ್ಞತಾ ದಿನವನ್ನು ನಡೆಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಸಂಚಾಲಕ ಕೆ.ಎಸ್. ಕೃಷ್ಣ ಭಟ್ ಅವರು ಪ್ರೌಢಶಿಕ್ಷಣದ ಮಹತ್ವ ಮತ್ತು ವಿದ್ಯಾರ್ಧಿಗಳು ಭವಿಷ್ಯದಲ್ಲಿ ಸಾಗಬೇಕಾದ ಮಾರ್ಗಗಳ ಬಗ್ಗೆ ತಿಳಿ ಹೇಳಿದರು.
ಸತ್ಯಸಾಯಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಭಟ್ ಅವರು ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿಲಯಪಾಲಕ ಉದನೇಶ್ವರ ಭಟ್, ರತ್ನಾಕರ ರೈ ಭಾಗವಹಿಸಿದ್ದರು.
ಮುಖ್ಯ ಶಿಕ್ಷಕ ರಘು ಟಿ.ವೈ ಪ್ರಸ್ತಾವಿಸಿದರು. ಸಹ ಶಿಕ್ಷಕ ಅಶೋಕ ಕುಮಾರ್ ಸ್ವಾಗತಿಸಿದರು. ಶಿಕ್ಷಕ ರವಿಚಂದ್ರ ಬಹುಮಾನ ವಿತರಿಸಿದರು. ಸಹಶಿಕ್ಷಕ ನಾರಾಯಣ ನಾಯ್ಕ ವಂದಿಸಿದರು. ವಿದ್ಯಾರ್ಥಿಗಳಾದ ಸತ್ಯಂ, ಆಶಿಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here