



ಬೆಂಗಳೂರು: ನಾಳೆ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ, ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. 600ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಸಾರಿಗೆ ವ್ಯವಸ್ಥೆ ಸೇರಿದಂತೆ, ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಆಗಲಿದೆ.
ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಇಲ್ಲ ಎಮಬ ಸ್ಪಷ್ಟ ಮಾಹಿತಿ ಶಿಕ್ಷಣ ಸಚಿವರು ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಕರ್ನಾಟಕ ಬಂದ್ ಹಿನ್ನಲೆಯಲ್ಲಿ ನಾಳೆ ರಾಜ್ಯದ ಆಯಾ ಜಿಲ್ಲಾಯ ಜಿಲ್ಲಾಧಿಕಾರಿಗಳು ಬಂದ್ ನ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡಲಿದ್ದಾರೆ. ಹೀಗಾಗಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದನ್ನು ಅವರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹೀಗಾಗಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂಬುದು ಸ್ಪಷ್ಟ.






