ವಿಟ್ಲ: ಕೇಪು ಶ್ರೀ ದುರ್ಗಾ ಫ್ರೆಂಡ್ಸ್, ದ.ಕ ಜಿಲ್ಲಾ ಅಮೆಚೂರ್ ಕಬಡ್ಡಿ ಫೆಡರೇಶನ್ ಬಂಟ್ವಾಳ ತಾಲೂಕು ಮತ್ತು ಕೇಪು ತುಳುನಾಡ ಫೈಟರ್‍ಸ್ ಇವರ ಸಂಯುಕ್ತ ಆಶ್ರಯದಲ್ಲಿ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಫೆ.15 ರಂದು 60 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮತ್ತು 450 ಕೆ.ಜಿ ತೂಕದ 7 ಜನರನ್ನೊಳಗೊಂಡ ತಂಡದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯ ನಡೆಯಲಿದೆ. ಸಂಜೆ 6 ಗಂಟೆಗೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಅಶೋಕ್ ಎ. ಇರಾಮೂಲೆ ಆಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಬೆಂಗಳೂರು ವಿವೇಕಾನಂದ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕ ಶಿವಪ್ರಸಾದ್ ಉದ್ಘಾಟಿಸಲಿದ್ದಾರೆ. ವಿಶೇಷ ಅಭ್ಯಾಗತರಾಗಿ ನಾನಾ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವೆ, ಕ್ರೀಡೆ, ಕೃಷಿ ಸಾಧಕರಿಗೆ ಸನ್ಮಾನ ನಡೆಯಲಿದೆ.
,

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here