ಬಂಟ್ಚಾಳ: ಬಂಟ್ವಾಳ ಉಪವಿಭಾಗ ವ್ಯಾಪ್ತಿಯ ಕುಕ್ಕಿಪಾಡಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ನಿರ್ವಹಣಾ ಕಾಮಗಾರಿಯನ್ನು ತಾಂತ್ರಿಕ ಕಾರಣಗಳಿಂದ ಗುರುವಾರದಿಂದ ಮಂಗಳವಾರಕ್ಕೆ ಬದಲಾಯಿಸಲಾಗಿದೆ ಎಂದು‌ ಬಂಟ್ವಾಳ ಮೆಸ್ಕಾಂನ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ. ಹಾಗಾಗಿ ಸಂಗಬೆಟ್ಟು, ಕುಕ್ಕಿಪಾಡಿ, ಸಿದ್ದಕಟ್ಟೆ, ವಾಮದಪದವು, ಪಂಜಿಕಲ್ಲು, ಕರ್ಪೆ, ಅರಳ, ರಾಯಿ, ಕೊಯಿಲ, ಎಲಿಯನಡುಗೋಡು, ಅಜ್ಜಿಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗ್ರು, ಬುಡೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಇನ್ನು ಮುಂದೆ ಪ್ರತಿ ಮಂಗಳವಾರ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here