


ಬಂಟ್ವಾಳ: ಛತ್ರಪತಿ ಶಿವಾಜಿಯ ಮಾತೃಪ್ರೇಮ, ದೇಶಪ್ರೇಮ ಪ್ರಸ್ತುತ ಸಮಾಜಕ್ಕೆ ಹೆಚ್ಚು ಆದರ್ಶಮಯ ಎಂದು ಉಪ ತಹಶೀಲ್ದಾರ್ ಶ್ರೀಧರ್ ಹೇಳಿದರು. ಅವರು ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸ ನೀಡಿದರು.
ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ರಾಧಾಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು.
ಪಾಣೆಮಂಗಳೂರು ಹೋಬಳಿ ಉಪತಹಸೀಲ್ದಾರ್ ರೂಪೇಶ್, ಆಹಾರ ಉಪತಹಸೀಲ್ದಾರ್ ಶ್ರೀನಿವಾಸ್, ಶಿರಸ್ತೇದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶಯ ನಿರ್ವಾಹಕ ವಿಶುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
[







