ಬಂಟ್ವಾಳ: ನವಚೇತನ ಸೇವಾ ಟ್ರಸ್ಟ್ ಬಂಟ್ವಾಳ ಇದರ ಆಶ್ರಯದಲ್ಲಿ ಏ.19 ರಂದು 19ನೇ ವರ್ಷದ ಸಾರ್ವಜನಿಕ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಬಂಟ್ವಾಳ ಬಿ.ಸಿರೋಡ್ ಸ್ವರ್ಶ ಕಲಾಮಂದಿರದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯದ ಮತ್ತು ಕಾಸರಗೋಡು ಜಿಲ್ಲೆಯ ವಧು-ವರರು ಹೆಸರು ನೋಂದಾಯಿಸಿಕೊಳ್ಳಬಹುದು. ಹೆಸರು ನೋಂದಾವಣೆ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಎಲ್ಲಾ ಜಾತಿ ವರ್ಗದ ವಧು-ವರರು ಸಾರ್ವಜನಿಕ ಉಚಿತ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಬಹುದು. ಮಾಹಿತಿಗಾಗಿ 9880880255 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here