ಒಡಿಯೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರ್‍ದ ತುಳುಕೂಟದ ಸಹಕಾರದೊಂದಿಗೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಎಪ್ರಿಲ್ 11 ಮತ್ತು 12ರ ಶನಿವಾರ ಮತ್ತು ಆದಿತ್ಯವಾರ ಎರಡು ದಿನಗಳ ತುಳು ಕಾವ್ಯ ರಚನಾ ಕಮ್ಮಟ(ತುಳು ಕಬಿತೆ ಕಟ್ಟುನ ಕಜ್ಜಕೊಟ್ಯ)ವನ್ನು ಏರ್ಪಡಿಸಲಾಗಿದೆ.

ಹಿರಿಯ ಕವಿ-ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರು ಶಿಬಿರದ ನಿರ್ದೇಶಕರಾಗಿದ್ದು, ತಜ್ಞರು ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು.
ಕಾವ್ಯ ರಚನೆಯಲ್ಲಿ ಆಸಕ್ತರಾಗಿರುವ ಯುವಕ-ಯುವತಿಯರು ತಮ್ಮ ಪೂರ್ಣ ಅಂಚೆ ವಿಳಾಸ, ದೂರವಾಣಿ ಸಂಖ್ಯೆ, ಕೃತಿ ರಚನೆಯ ವಿವರಗಳನ್ನೊಳಗೊಂಡ ಅರ್ಜಿಯನ್ನು ಮಾರ್ಚ್ 31ರೊಳಗೆ ನಿರ್ದೇಶಕರು, ತುಳು ಕಾವ್ಯ ರಚನಾ ಕಮ್ಮಟ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಒಡಿಯೂರು- 574243, ಬಂಟ್ವಾಳ ತಾಲೂಕು, ದ.ಕ. ಇಲ್ಲಿಗೆ ಬರೆದು ನೋಂದಾಯಿಸಲು ಕೋರಿದೆ ಅಥವಾ ಇಮೇಲ್:info@shreeodiyoor.orgಗೆ ಕಳುಹಿಸಿಕೊಡಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08255- 266282/266211, ಮೊಬೈಲ್:9448177811ನ್ನು ಸಂಪರ್ಕಿಸಬಹುದು. ಸೀಮಿತ ಪ್ರವೇಶಾವಕಾಶ ಇರುವುದರಿಂದ ಅರ್ಜಿಗಳನ್ನು ಆದಷ್ಟು ಶೀಘ್ರ ಕಳುಹಿಸಿಕೊಡುವಂತೆ ಸೂಚಿಸಿದೆ. ಆಯ್ಕೆಯಾದವರಿಗೆ ಒಡಿಯೂರಿಗೆ ಬಂದು ಹೋಗುವ ಸಾಮಾನ್ಯ ಪ್ರಯಾಣ ವೆಚ್ಚ ನೀಡಲಾಗುವುದು. ಕಮ್ಮಟದಲ್ಲಿ ರಚನೆಯಾದ ಕವನಗಳು ಅನಂತರ ಕೃತಿರೂಪದಲ್ಲಿ ಪ್ರಕಟವಾಗಲಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here