ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಿನ್ನೆ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಂಗಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಚಂದನ ವಾಹಿನಿಯ ಥಟ್ ಅಂತ ಹೇಳಿ ನಿರೂಪಕ ಡಾ. ನಾ.ಸೋಮೇಶ್ವರ ಆಗಮಿಸಿದ್ದರು. ಇವರು ಪದವಿ ಕಾಲೇಜಿನಲ್ಲಿ ಪ್ರಾಚೀನ ಕರ್ನಾಟಕ ಮತ್ತು ಕನ್ನಡ ಎಂಬ ವಿಷಯದ ಕುರಿತು 15 ಸುತ್ತಿನ ಥಟ್ ಅಂತ ಹೇಳಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ, ಉಪನ್ಯಾಸಕರು ಹಾಗೂ ಸಾರ್ವಜನಿಕರ ವಿವಿಧ ಸ್ತರದ ಒಟ್ಟು 6 ತಂಡಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಹಿರಿಯರಾದ ಕಮಲಾ ಪ್ರಭಾಕರ ಭಟ್, ಸಂಸ್ಥೆಯ ಅಧ್ಯಕ್ಷ ನಾರಾಯಣ ಸೋಮಯಾಜಿ, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿದ್ದರು.  ಭೌತಶಾಸ್ತ್ರ ಉಪನ್ಯಾಸಕಿ ಕವಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here