ನವದೆಹಲಿ : ಈಶಾನ್ಯ ದೆಹಲಿಯಲ್ಲಿ ತಾರಕಕ್ಕೇರಿರುವ ಹಿಂಸಾಚಾರ-ಗಲಭೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ನಮ್ಮ ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯವೇ ಮುಖ್ಯ. ದೆಹಲಿಯ ನನ್ನ ಸಹೋದರ, ಸಹೋದರಿಯರು ದಯವಿಟ್ಟು ಸಹನೆಯಿಂದ ಇರಬೇಕು. ಎಂಥದ್ದೇ ಸಮಯದಲ್ಲೂ ಭ್ರಾತೃತ್ವವನ್ನು ಕಾಪಾಡಬೇಕು. ಆದಷ್ಟು ಶೀಘ್ರವೇ ದೆಹಲಿ ಸಹಜಸ್ಥಿತಿಗೆ ಮರಳುವುದು ತುಂಬ ಮುಖ್ಯ’ ಎಂದು ಹೇಳಿದ್ದಾರೆ.

ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ್ದು, ‘ ದೆಹಲಿಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಗಲಭೆ ಪರಿಸ್ಥಿತಿಯ ಬಗ್ಗೆ ವ್ಯಾಪಕ ಪರಿಶೀಲನೆ, ಶಾಂತಿ ಕಾಪಾಡಲು, ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ದೆಹಲಿ ಪೊಲೀಸರು, ಭದ್ರತಾ ಸಿಬ್ಬಂದಿ ಪ್ರಯತ್ನ ಪಡುತ್ತಿದ್ದಾರೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ…

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here