ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ನಡೆಯಲಿದೆ. ಮಾ.೪ ರಿಂದ ಮಾ.23ರ ವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 6,80,049 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 1016 ಪರೀಕ್ಷಾ ಕೇಂದ್ರಗಳು ಇವೆ.
ವಿಜ್ಞಾನ ವಿಭಾಗದ 2,16,930 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,61,674 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದ 2,01,445 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವಿಶೇಷ ಭದ್ರತೆ: ಪ್ರಶ್ನೆ ಪತ್ರಿಕೆಗಳು ಆಯಾ ಜಿಲ್ಲೆಗಳ ಜಿಲ್ಲಾ ಖಜಾನೆಗಳಿಂದ ತೀವ್ರ ಭದ್ರತೆ ನಡುವೆ ತೆರೆಯಲಾಗುತ್ತದೆ. ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಘಟಕಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಅಕ್ರಮಗಳ ಮೇಲೆ ಜಿಲ್ಲಾಧಿಕಾರಿ ಕಚೇರಿಯಿಂದಲೇ ನಿಗಾ ಇಡಲಾಗುತ್ತದೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here