ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯನ್ನು ಶಿಕ್ಷಣ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷಕ್ಕೆ ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಲಭ್ಯವಿರುವ ಸೀಟುಗಳಿಗೆ ಮಾರ್ಚ್ 26 ರಿಂದ ಏಪ್ರಿಲ್ 20 ರ ವರೆಗೆ ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ನೀಡಿದೆ.
ಸರ್ಕಾರಿ ಶಾಲೆ ಇಲ್ಲದ ಕಡೆಗಳಲ್ಲಿ ಅನುದಾನಿತ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಅಥವಾ ಅನುದಾನಿತ ಶಾಲೆ ಇಲ್ಲದ ಕಡೆಗಳಲ್ಲಿ ಮಾತ್ರ ಖಾಸಗಿ ಶಾಲೆಗಳಿಗೆ ಶೇ. 25% ರಷ್ಟು ಸೀಟುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮಾರ್ಚ್ 26 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರ ವರೆಗೆ ಅರ್ಜಿ ಸಲ್ಲಿಸಬಹುದು. ಮೇ. 4 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಹೆಚ್ಚಿನ ಮಾಹಿತಿ ಶಿಕ್ಷಣ ಇಲಾಖೆಯ ವೆಬ್ ಸೈಟ್ http://schooleduction.kar.nic.in ಗೆ ಭೇಟಿ ನೀಡಬಹುದು ಎಂದು ಇಲಾಖೆ ತಿಳಿಸಿದೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here