ಬಿ.ಸಿ.ರೋಡ್ : ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಕೂರಿಯಾಳ ದುರ್ಗಾನಗರ ಬಳಿಯ ಜ್ಞಾನಜ್ಯೋತಿ ಗೆಳೆಯರ ಬಳಗ ಇದರ ಪ್ರಥಮ ವರ್ಷದ ಸಂಭ್ರಮಾಚರಣೆ ಮಾ.7 ರಂದು ಕೂರಿಯಾಳದಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಮ್ಟಾಡಿ ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ದಿನೇಶ್ ಪೂಜಾರಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿದ್ಧಕಟ್ಟೆ ಸರಕಾರಿ ಪ್ರೌಢ ಶಾಲೆ ಅಧ್ಯಾಪಕ ಮಹೇಶ್ ವಿ. ಕರ್ಕೇರ, ಪ್ರಗತಿಪರ ಕೃಷಿಕ ಲೇಖಾ ಪ್ರಸನ್ನ ಭಂಡಾರಿ, ಎಂ.ವಿ. ಶೆಟ್ಟಿ ಕಾಲೇಜಿನ ಉಪನ್ಯಾಸಕ ಅಕ್ಷತಾ ಪವನ್ ಭಂಡಾರಿ, ಜ್ಞಾನ ಜ್ಯೋತಿ ಗೆಳೆಯರ ಬಳಗದ ಅಧ್ಯಕ್ಷ ಸುರೇಂದ್ರ ಶೆಟ್ಟಿ ಪಾಪುದಡ್ಕ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮದ ನಂತರ ಶ್ರೀ ತುಳಸಿ ಕಲಾ ತಂಡದ ಸದಸ್ಯರಿಂದ ಕೊರ್ಪಿನಾ ಕೊರೊಡೇ ಎಂಬ ವಿಭಿನ್ನ ಶೃಲಿಯ ಹಾಸ್ಯಮಯ ನಾಟಕ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here