Friday, October 27, 2023

ಪಕ್ಷ ಸಂಘಟನಾತ್ಮಕವಾಗಿ ಬೆಳೆಯಲು ಕಾರ್ಯಕರ್ತರ ಮೌಲ್ಯಯುತ ಜವಬ್ದಾರಿ ಅಗತ್ಯ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

Must read

ಬಂಟ್ವಾಳ: ಪಕ್ಷವನ್ನು ಮುಂದಿನ ದಿನಗಳಲ್ಲಿ ಸಂಘಟನಾತ್ಮಕವಾಗಿ ಬೆಳೆಯಲು ನೂತನ ಪದಾಧಿಕಾರಿಗಳ ಜೊತೆ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡುವಂತೆ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಅವರು ಬಿಸಿರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಂಟ್ವಾಳ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ ಪಶ್ಚಾತ್ತಾಪ ಇಲ್ಲದೆ ಖುಷಿಯಿಂದ ಕೆಲಸ ಮಾಡಲು ಸಾಧ್ಯವಾಗಿದೆ. ಪಕ್ಷದ ಮುಖಾಂತರ ಅನುದಾನಗಳು ಗ್ರಾಮ ಗ್ರಾಮದ ಅಭಿವೃದ್ಧಿ ಗೆ ಹಂಚಿದಾಗ ಪಕ್ಷ ಗಟ್ಟಿಯಾಗುತ್ತದೆ ಎಂಬ ನಂಬಿಕೆ ನನಗಿದೆ. ಸಂಘಟನೆಯ ದೃಷ್ಟಿಯಿಂದ ಪಕ್ಷದ ಯಾವುದೇ ವಿಚಾರಗಳಿದ್ದಾಗ ನಾಯಕರ ಜೊತೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ ಮಾಡುವಂತೆ ಅವರು ತಿಳಿಸಿದರು. ಕೇಂದ್ರ ಸರಕಾರದ ಉತ್ತಮ‌ಆಡಳಿದ ವ್ಯವಸ್ಥೆ ಇಡೀ ಭಾರತವನ್ನು ಸದೃಢ ಭದ್ರ ರಾಷ್ಟ್ರವಾಗಿ ಮಾರ್ಪಾಡಾಗುತ್ತದೆ ಎಂದರು.

ಜಿಲ್ಲಾದ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು ಅನೇಕರ ಬಲಿದಾನದ ಫಲವಾಗಿ ಕ್ಷೇತ್ರ ಬಿಜೆಪಿ ಸಂಘಟನಾತ್ಮಕ ವಾಗಿ ಬೆಳೆದಿದೆ. ಭವ್ಯಭಾರತದ ನಿರ್ಮಾಣದ ಉದ್ದೇಶದಿಂದ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಕಾರ್ಯಕರ್ತರಿಗೆ ಜವಬ್ದಾರಿ ಯನ್ನು ನೀಡಲಾಗುತ್ತಿದೆ.

ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಸಹಿತ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ಅವರು ಬಿಜೆಪಿ ಧ್ವಜವನ್ನು ದೇವಪ್ಪ ಪೂಜಾರಿ ಅವರಿಗೆ ಹಸ್ತಾಂತರ ಮಾಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ನೂತನ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದೇವಪ್ಪ ಪೂಜಾರಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾದ ನನಗೆ ಜವಬ್ದಾರಿ ಪಕ್ಷ ನೀಡುತ್ತದೆ ಎಂಬ ನಿರೀಕ್ಷೆ ಇರಲಿಲ್ಲ. ಪಕ್ಷದ ಹಾಗೂ ರಾಜಕೀಯದಲ್ಲಿ ಹಲವು ಹುದ್ದೆಯನ್ನು ಅಲಂಕರಿಸಿ ಪ್ರಸ್ತುತ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಕ್ಷಣ , ನನಗೆ ನೀಡಿದ ಜವಬ್ದಾರಿ ಗೆ ಯಾವುದೇ ಚ್ಯುತಿ ಬಾರದ ರೀತಿಯಲ್ಲಿ ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸದ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಗಳಾದ ರಾಮ್ ದಾಸ ಬಂಟ್ವಾಳ, ಕಸ್ತೂರಿ ಪಂಜ, ಸುದೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೇಶ್ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯಪೂಜಾರಿ , ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ಮೋನಪ್ಪ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಪದಾಧಿಕಾರಿಗಳನ್ನು ಬಂಟ್ವಾಳ ವಿಧಾನ ಸಭಾ ಪರವಾಗಿ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು.

More articles

Latest article