ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವತಿಯಿಂದ ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಸಪ್ತಪದಿ ರಥದ ಚಾಲನೆಯು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ಮಾ.7ರಂದು ಶನಿವಾರ ನಡೆಯಿತು. ಕರ್ನಾಟಕ ಸರಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳ ಧರ್ಮದಾಯ ಧತ್ತಿ ಇಲಾಖೆ ವತಿಯಿಂದ ನಡೆಯುವ ಸಾಮೂಹಿಕ ವಿವಾಹದ ಸಪ್ತಪದಿ ರಥಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ.ರಾಮ್ ಭಟ್ ಆಡಳಿತ ಮೊಕ್ತೇಸರ ಅಮ್ಮುಂಜೆಗುತ್ತು, ಡಾ.ಮಂಜಯ್ಯ ಶೆಟ್ಟಿ, ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here