ಬಂಟ್ವಾಳ: ವೀರಕಂಬ ಮಜಿ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಸರಕಾರದಿಂದ ನೀಡಿದ ಉಚಿತ ಸಮವಸ್ತ್ರವನ್ನು ಜಿ.ಪಂ. ಸದಸ್ಯೆ ಮಂಜುಳಾ ಮಾವೆ ಹಾಗೂ ವೀರಕಂಬ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲತಾ ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ರಾಮಚಂದ್ರ ಪ್ರಭು, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ವಿಜಯ ಶೇಖರ್, ಸದಸ್ಯರಾದ  ಕೊರಗಪ್ಪ ನಾಯ್ಕ, ವಾಮನ ಬಂಗೇರ ,ಉಮಾವತಿ ಉಪಸ್ಥಿತರಿದ್ದರು.
ಶಾಲಾ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು .ಶಾಲಾ ಶಿಕ್ಷಕಿಯರು ಸಹಕರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here