ಕೇರಳ: ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು ಕೇರಳದಲ್ಲಿ. ವಿದೇಶದಿಂದ ಬಂದ ಮೂವರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಎಲ್ಲಾ ಹಿನ್ನಲೆಯಲ್ಲಿ ಕೇರಳ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಇದೀಗ ಪ್ರೀ ನರ್ಸರಿಯಿಂದ 7ನೇ ತರಗತಿಯವರೆಗಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಫೆಬ್ರವರಿ 29ರಂದು ಇಟಲಿಯಿಂದ ಕೇರಳದ ಪೆಟ್ಟಣತಿಟ್ಟಿಗೆ ಆಗಮಿಸಿದ್ದ ಮೂವರಲ್ಲಿ, ಕೊರೊನಾ ಸೋಂಕು ಪತ್ತೆಯಾಗಿತ್ತು. ಕೇರಳದಲ್ಲೇ ಮೊದಲ ದೇಶದ ಕೊರೊನಾ ವೈರಸ್ ಸೋಂಕು ಪ್ರಕರಣ ಬೆಳಕಿಗೆ ಬಂದಿತ್ತು. 3 ಪ್ರಕರಣಗಳು ಇದೀಗ ರಾಜ್ಯದಲ್ಲಿ 12ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರೀ ನರ್ಸರಿಯಿಂದ 7ನೇ ತರಗತಿಯವರೆಗಿನ ಶಾಲೆಗಳಿಗೆ ಕೇರಳ ಸರ್ಕಾರ ರಜೆ ಘೋಷಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯದಲ್ಲಿ ಮೊದಲು 3 ಕೊರೊನಾ ಪಾಸಿಟಿವ್ ಪ್ರಕಣಗಳು ಪತ್ತೆಯಾದ ನಂತರ ಈ ಸಂಖ್ಯೆ ಇದೀಗ 12ಕ್ಕೆ ಏರಿಕೆಯಾಗಿದೆ. ರಾಜ್ಯದ ಮತ್ತಷ್ಟು ಜನರಿಗೆ ಕೊರೊನಾ ವೈರಸ್ ಸೋಂಕು ತಗಲದಂತೆ ಮುನ್ನೆಚ್ಚರಿಕಾ ಕ್ರಮವಾಗಿ 7ನೇ ತರಗತಿಯ ವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಆರಂಭವಾಗಿದ್ದಂತ ಮಕ್ಕಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here