ವಿಟ್ಲ: ದ.ಕ ಜಿಲ್ಲಾ ದಾರಿಮೀಸ್ ಅಸೋಶಿಯೇಶನ್‌ನ ೧೮ನೇ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ಫಿಖ್‌ಹ್ ಸೆಮಿನಾರ್ ಮತ್ತು ಶಂಸುಲ್ ಉಲಮಾ ಆಂಡ್ ನೇರ್ಚೆ ಮಾರ್ಚ್ ೧೧ರ ಬುಧವಾರ ಕೊಡಾಜೆಯ ತರ್ಬಿಯತುಲ್ ಮದ್ರಸದಲ್ಲಿ ನಡೆಯಲಿದೆ.
ಸಮಸ್ತ ಕೇಂದ್ರ ಮುಶಾವರದ ಸದಸ್ಯ ಶೈಖುನಾ ಕೆಕೆ ಮಾಹಿನ್ ಮುಸ್ಲಿಯಾರ್ ತೊಟ್ಟಿ ದುವಾಃ ನೀಡಲಿದ್ದಾರೆ. ದ.ಕ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಸಮಸ್ತ ಮುಶಾವರ ಸದಸ್ಯ ಎ.ವಿ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಕೆ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಅನುಸ್ಮರಣಾ ಭಾಷಣ ಮಾಡಲಿದ್ದಾರೆ. ಉಸ್ತಾದ್ ಶುಹೈಬ್ ದಾರಿಮಿ ಅಲ್ ಹೈತಮಿ ವಿಷಯ ಮಂಡನೆ ಮಾಡಲಿದ್ದಾರೆ. ಹಾಗೂ ಇತರ ಉಲಮಾ ಉಮರಾಗಳು ಭಾಗವಹಿಸಲಿದ್ದಾರೆ ಎಂದು ದ.ಕ ದಾರಿಮೀಸ್ ಅಸೋಶಿಯೇಶನ್‌ನ ಅಧ್ಯಕ್ಷ ಅಬ್ದುಲ್ ಖಾದಿರ್ ದಾರಿಮಿ ಕೊಡಂಗಾಯಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here