ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಭರವಸೆ ಕೋಶ ಹಾಗೂ ಮಂಗಳೂರಿನ ಭಾರತ್ ಆಟೋಕಾರ್ ಪ್ರೈವೇಟ್ ಲಿಮಿಟೆಡ್ ಇವರ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು.

ಮಂಗಳೂರು ಭಾರತ್ ಆಟೋ ಕಾರ್ಸ್ ನ ಮಾನವ ಸಂಪನ್ಮೂಲ ಎಕ್ಸಿಕ್ಯೂಟಿವ್ ಪ್ರೀತಂ ಅವರು ತೃತೀಯ ಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಂದ ವೈಯಕ್ತಿಕ ಮಾಹಿತಿ ಪಡೆದು, ನೇರ ಸಂದರ್ಶನದ ಮೂಲಕ ಉದ್ಯೋಗ ಮೇಳವನ್ನು ನಡೆಸಿಕೊಟ್ಟರು. ತಮ್ಮ ಉದ್ಯಮದಲ್ಲಿ ಇರುವ ವಿವಿಧ ಉದ್ಯೋಗವಕಾಶಗಳ ಮಾಹಿತಿ, ಅದಕ್ಕೆ ಬೇಕಾದ ವಿದ್ಯಾರ್ಹತೆ ಹಾಗೂ ತರಬೇತಿಯ ಅವಶ್ಯಕತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ಪ್ರಸ್ತುತ ವಿದ್ಯಮಾನದಲ್ಲಿ ವಿದ್ಯಾರ್ಥಿಗಳಿಗೆ ಇರಬೇಕಾದ ವಿಶೇಷ ಕೌಶಲ್ಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಮಾತನಾಡಿ, ಹೆಚ್ಚು ವಿದ್ಯಾರ್ಥಿಗಳಿಗೆ ಯಶಸ್ಸಿನ ಗುಟ್ಟು ಪರಿಶ್ರಮದಲ್ಲಿ ಇದೆ ಎಂದರು. ಒಳ್ಳೆಯ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಹತೆ ತರಬೇತಿಯ ಜೊತೆಗೆ ವಿಶೇಷ ಕೌಶಲ್ಯವನ್ನು ನಮ್ಮದಾಗಿಸಿಕೊಳ್ಳಬೇಕು ಎಂದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಶ್ರೀದೇವಿ ಪ್ರಸಾದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದ್ವಿತೀಯ ಬಿಕಾಂ ವಿದ್ಯಾರ್ಥಿನಿ ನೀಮ ಮತ್ತು ತಂಡ ಪ್ರಾರ್ಥಿಸಿದರು. ದ್ವಿತೀಯ ಬಿಕಾಂ ನ ಚೈತ್ರ  ಸ್ವಾಗತಿಸಿ, ಉದ್ಯೋಗ ಭರವಸೆ ಕೋಶದ ಸಂಚಾಲಕ ನುಮಂತಯ್ಯ ವಂದಿಸಿದರು. ದ್ವಿತೀಯ ಬಿಕಾಂ ನ ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here