Saturday, April 20, 2024

ವಿಟ್ಲ: ಮಹಿಳಾ ಸ್ವ-ಸಹಾಯ ಸಂಘಗಳ ಜಾಥಾ

ವಿಟ್ಲ: ದೀನದಯಾಳ್ ಅಂತ್ಯೋದಯ ಯೋಜನೆ (ಡೇ-ನಲ್ಮ್) ಮತ್ತು ಪಿ.ಎಂ.ಎ ವೈ ಅಭಿಯಾನದಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2020ರ ಪ್ರಯುಕ್ತ ವಿಟ್ಲ ಪಟ್ಟಣ ಪಂಚಾಯಿತಿ ವಠಾರದಲ್ಲಿ ಪಟ್ಟಣ ಪಂಚಾಯಿತಿ ಮಹಿಳಾ ಸ್ವಸಹಾಯ ಸಂಘಗಳ ಜಾಥಾ, ಪ್ರಮಾಣ ವಚನ ಕಾರ್ಯಕ್ರಮ ಮಂಗಳವಾರ ನಡೆಯಿತು.
’ಬೇಟಿ ಬಚಾವೋ-ಬೇಟಿ ಪಡಾವೋ’ ಬಗ್ಗೆ ಪ್ರಮಾಣ ಸ್ವೀಕಾರ ಕಾರ್ಯಕ್ರಮದ ಬಳಿಕ ಪಿಎಂಎವೈ ಫಲಾನುಭವಿಗಳಿಗೆ ಸಸಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು.
ಸಭಾ ಅಧ್ಯಕ್ಷತೆಯನ್ನು ವಹಿಸಿದ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಮಹಿಳೆಯರ ಸ್ಥಾನಮಾನದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಜಯಂತ, ಮುಖ್ಯಾಧಿಕಾರಿಯವರಾದ ಮಾಲಿನಿ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ವಿಜಯಲಕ್ಷ್ಮಿಯವರು ಉಪಸ್ಥಿತರಿದ್ದರು. ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು ಮತ್ತು ಸ್ವಸಹಾಯ ಸಂಘಗಳ ಸದಸ್ಯರು, ಪಿಎಂಎವೈ (ಪ್ರಧಾನ ಮಂತ್ರಿ ಆವಾಜ್ ಯೋಜನೆ)ಫಲಾನುಭವಿಗಳು ಮತ್ತು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ.ಪಂ.ಸುನೀತಾ ಕೋಟ್ಯಾನ್ ಸ್ವಾಗತಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾಕೃಷ್ಣಪ್ಪ ಪ್ರಸ್ತಾವಿಸಿದರು. ಚಂದ್ರಕಾಂತಿ ಕಾರ್ಯಕ್ರಮ ನಿರೂಪಿಸಿದರು.

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...