ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಇನ್ನಿತರ ಯೋಜನೆಗಳನ್ನೊಳಗೊಂಡ ವಿವಿಧ ಕಾಮಗಾರಿಗಳಿಗೆ ಶನಿವಾರ ಗುದ್ದಲಿಪೂಜೆ ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.

ಮಧ್ಯಾಹ್ನ 1:30 ಗಂಟೆಗೆ ಕದ್ರಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ, 2:15 ಮಂಗಳೂರು ಮಹಾನಗರ ಪಾಲಿಕೆಯ ಬಳಿ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರದ ಕಾಮಗಾರಿಗೆ ಗುದ್ದಲಿಪೂಜೆ, 2:45 ಗಂಟೆಗೆ ಕೊಡಿಯಾಲ್ ಬೈಲ್`ನಲ್ಲಿ ಒಳಚರಂಡಿ ಸಂಪರ್ಕ ಕಾಮಗಾರಿ, 3:30 ಗಂಟೆಗೆ ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿ, 4:15 ಗಂಟೆಗೆ ಎಮ್ಮೆಕೆರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೊಳ ಮತ್ತು ಸಮುದಾಯ ಮಟ್ಟದ ಸೌಲಭ್ಯಗಳಿಗೆ ಗುದ್ದಲಿಪೂಜೆ ನೆರವೇರಲಿದೆ ಎಂದು ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here