


ವಿಟ್ಲ: ಮಾರಕ ಕೋರೋನ ವೈರಸ್ ಹರಡುವ ಭೀತಿಯಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ರಾಜ್ಯದ ಮುಖ್ಯ ಮಂತ್ರಿ, ದ.ಕ ಜಿಲ್ಲಾಧಿಕಾರಿಗಳ ಆದೇಶ ಪ್ರಕಾರ ಕೋರೋನ ವೈರಸ್ ಭೀತಿಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿಟ್ಲ ಪೇಟೆಯಲ್ಲಿ ನಡೆಯುವ ವಾರದ ಸಂತೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಮತ್ತು ರಸ್ತೆ ಬದಿಯಲ್ಲಿ ಮಾರಲ್ಪಡುವ ತಿಂಡಿ ತಿನ್ನಿಸುಗಳ ವ್ಯಾಪಾರಗಳನ್ನು ಕೂಡಲೇ ನಿಲ್ಲಿಸುವುದು ಹಾಗೂ ಅಧಿಕ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ಈ ಕೂಡಲೇ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರು ಸಹಕರಿಸಬೇಕಾಗಿ ವಿಟ್ಲ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





