



ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಘೋಷಿಸಿದ್ದಾರೆ. ಇಂದಿನಿಂದ ದೇವಸ್ಥಾನ, ದೇವಸ್ಥಾನ ಉತ್ಸವಗಳಲ್ಲಿ ಸಿಬ್ಬಂದಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಎಲ್ಲ ಸೇವೆಗಳನ್ನು ರದ್ದುಪಡಿಸಲಾಗುವುದು ಎಂದು ಮಾಹಿತಿ ನೀಡಿದರು. ಕೊರೊನಾ ವೈರಸ್ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.






