ಮಂಗಳೂರು: ಕೊರೋನಾ ಸೋಂಕು​​ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144(3) ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್​ ಆದೇಶ ಹೊರಡಿಸಿದ್ದಾರೆ. ಕೊವೀಡ್-೧೯ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲೆಯ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾಮೂಹಿಕ ವಿವಾಹಗಳು ಮತ್ತು ಯಾವುದೇ ಜನ ಸೇರುವ ಕಾರ್ಯಕ್ರಮಗಳನ್ನು ನಡೆಸಬಾರದು. ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿರ್ಬಂಧ ಹೇರಲಾಗಿದೆ ಎಂದು ಸಿಂಧೂ ಬಿ. ರೂಪೇಶ್​​ ತಿಳಿಸಿದ್ದಾರೆ.
ಕೊರೋನಾ ವೈರಸ್​​ ಕಾರಣ ಈ ಆದೇಶ ಹೊರಡಿಸಲಾಗಿದೆ. ಮುಂದಿನ ಆದೇಶದವರೆಗೂ ಈ ಸೆಕ್ಷನ್ ಜಾರಿಯಲ್ಲಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಜಿಲ್ಲಾಡಳಿತ ಆದೇಶ ಮೀರಿ ಉತ್ಸವ/ಜಾತ್ರೆಗಳನ್ನು ಮಾಡಬಾರದು. ಒಂದು ವೇಳೆ ನಡೆದರೆ ಕೇವಲ ಧಾರ್ಮಿಕ ಕೇಂದ್ರಗಳ ಸಿಬ್ಬಂದಿ ಮಾತ್ರ ಭಾಗವಹಿಸಬಹುದು. ದೇವರ ದರ್ಶನ ಹೊರತು ಉಳಿದ ಸೇವೆಗಳನ್ನು ರದ್ದು ಮಾಡಲಾಗಿದೆ ಎಂದರು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ದೇವಸ್ಥಾನಗಳಿಗೆ ಕೇವಲ ದೇವರ ದರ್ಶನವನ್ನು ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದೆ ಹಾಗೂ ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ.
ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಲಾಗಿದೆ, ಬೇಸಿಗೆ ಶಿಬಿರ ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದಂತೆ ಆದೇಶಿಸಲಾಗಿದೆ, ಪಾರ್ಕ್, ಬೀಚ್‍ಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದುವೆ ಸಮಾರಂಭಗಳಲ್ಲಿಯೂ ಹೆಚ್ಚಿನ ಜನಸಂದಣಿ ಸೇರದೆ ಸರಳವಾಗಿ ಆಯೋಜಿಸಲು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here