ಬಂಟ್ವಾಳ: ಕಾಮುಕ ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಬಾಲಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಯಾಗಿದೆ.
ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಎಂಬಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ.
ಆರೋಪಿ ಅಪ್ರಾಪ್ತ ಮಗಳಿಗೆ ಕಳೆದ ಮೂರು ವರ್ಷಗಳಿಗೆ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ, ಎಂದು ಮಗಳು ದೂರಿನಲ್ಲಿ ತಿಳಿಸಿದ್ದಾಳೆ.
ಸೋಮವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಮತ್ತೆ ಅತ್ಯಾಚಾರವೆಸಗಿದ್ದು, ಬಾಲಕಿ ಅಸ್ವಸ್ಥಳಾಗಿದ್ದಳು. ಈ ಹಿನ್ನೆಲೆಯಲ್ಲಿ ದೈಹಿಕವಾಗಿ  ಬಳಲುತ್ತಿದ್ದ ಈಕೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದಾಗ ಅವಳು ಆಸ್ಪತ್ರೆಯಲ್ಲಿ ಎಲ್ಲಾ ವಿಚಾರಗಳನ್ನು ಬಾಯಿಬಿಟ್ಟಿದ್ದು, ದೂರು ದಾಖಲಾಗಿದೆ.
ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಹಾಗೂ ವಿಟ್ಲ ಎಸ್ ಐ ವಿನೋದ್ ರೆಡ್ಡಿಯವರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here