


ನವದೆಹಲಿ: ವಿಶ್ವದೆಲ್ಲೆಡೆ ಮಾರಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಬಗ್ಗೆ ಹೇಗೆ ಜಾಗೃತರಾಗಬೇಕೆಂಬ ಕುರಿತು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಪ್ರಧಾನಿ ಕಾರ್ಯಲಯ ಮಾಹಿತಿ ನೀಡಿದ್ದು, ದೇಶದ ಜನತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂಬ ಮಾಹಿತಿ ಇದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಪರಿಶೀಲಿಸಲು ಪ್ರಧಾನಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತುಕತೆ ನಡೆಸಿದ್ದಾರೆ. ವೈಧ್ಯರೊಂದಿಗೆ ಹಾಗೂ ಇತರ ತಜ್ಞರೊಂದಿಗೆ ಮಾತುಕತೆ ನಡೆಸಿ, ಸೊಂಕು ಹರಡದಂತೆ ತಡೆಗಟ್ಟುವ ಉಪಾಯಗಳು ಹಾಗೂ ಜನರಿಗೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ.





