


ಬಂಟ್ವಾಳ: ಮಾ.22 ರಂದು ಆದಿತ್ಯವಾರ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯ ವರೆಗೆ ಜನತಾಕರ್ಪ್ಯೂ ಪಾಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ನಾಳೆಯಿಂದ ಪ್ರತಿಯೊಬ್ಬ ನಾಗರಿಕರಿಗೂ ಈ ಬಗ್ಗೆ ತಿಳಿಸುವಂತೆ ರಾಜ್ಯಸರಕಾರ ಸಂಬಂಧಿಸಿದಪಟ್ಟ ಇಲಾಖೆ ಹಾಗೂ ಸ್ಥಳೀಯ ಸಂಘಸಂಸ್ಥೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಹಿರಿಯ ನಾಗರಿಕರು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದ್ದಾರೆ. ಆದಷ್ಟು ಎಲ್ಲರೂ ಮನೆಯಲ್ಲಿ ಕಳೆಯಿರಿ, ಅಗತ್ಯ ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಬನ್ನಿ ಎಂದು ಅವರು ಮನವಿ ಮಾಡಿದ್ದಾರೆ.





