


ಬಂಟ್ವಾಳ: ಇಡೀ ವಿಶ್ವವೇ ಒಂದು ರೀತಿಯಲ್ಲಿ ಆತಂಕಕ್ಕೆ ಒಳಗಾಗಿದೆ. ವಿಶ್ವಾದ್ಯಂತ ಹರಡಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಹಲವಾರು ಪ್ರಕರಣಗಳು ಪತ್ತೆಯಾಗಿದ್ದು, ಜನರು ಒಂದು ರೀತಿಯಲ್ಲಿ ಆತಂಕಕ್ಕೊಳಗಾಗಿದ್ದಾರೆ. ನಾಗರಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಆರೋಗ್ಯ ಇಲಾಖೆ ನೀಡಿರುವ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವೈರಸ್ ಹರಡದಂತೆ ಜಾಗೃತರಾಗಿ.
ನಾವು ಈ ದೇಶದ ಜವಾಬ್ದಾರಿಯುತ ನಾಗರೀಕರಾಗಿ ದೇಶದ ಜನರ ಆರೋಗ್ಯ ದೃಷ್ಟಿಯಿಂದ ನಾಳೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಈ ದೇಶದ ಪ್ರಧಾನ ಮಂತ್ರಿಯವರು ನೀಡಿರುವ ಕರೆಯನ್ನು ಗೌರವಿಸಿ “ಜನತಾ ಕರ್ಫ್ಯೂ”ವನ್ನು ಬೆಂಬಲಿಸಬೇಕಾಗಿ ಎಲ್ಲಾ ಸಂಘ ಸಂಸ್ಥೆಗಳಲ್ಲಿ, ಬಸ್ಸು, ಲಾರಿ, ಟ್ಯಾಕ್ಸಿ, ರಿಕ್ಷಾ ಚಾಲಕ-ಮಾಲಕರಲ್ಲಿ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳ ಮಾಲಕರಲ್ಲಿ ಹಾಗೂ ಎಲ್ಲಾ ಸಜ್ಜನ ನಾಗರಿಕ ಬಂಧುಗಳಲ್ಲಿ ವಿನಂತಿಸಿಕೊಳ್ಳುತ್ತಾ, ನೀವು ಬೆಂಬಲಿಸಿ ಉಳಿದವರನ್ನು ಬೆಂಬಲಿಸುವಂತೆ ಪ್ರೇರೇಪಿಸಿ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ. ಅಧ್ಯಕ್ಷ ದೇವಪ್ಪ ಪೂಜಾರಿ ಮನವಿ ಮಾಡಿದ್ದಾರೆ.





