Monday, April 8, 2024

ಜನತಾ ಕರ್ಫ್ಯೂ : ಸೂರಿಕುಮೇರು ಚರ್ಚ್ ಸಂಪೂರ್ಣ ಬಂದ್

ಬಂಟ್ವಾಳ : ಕೊರೊನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಜನತಾ ಕರೆಯನ್ನು‌ ಬೆಂಬಲಿಸಿ, ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ರವರ ಆದೇಶದಂತೆ ಸೂರಿಕುಮೇರಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ಸಂಪೂರ್ಣ ಸ್ಥಬ್ದಗೊಂಡಿದೆ. ಚರ್ಚ್ ಪ್ರವೇಶ ದ್ವಾರದಲ್ಲಿರುವ ಗೇಟನ್ನು ಮುಚ್ಚುವ ಮೂಲಕ ವಂದನೀಯ ಫಾದರ್ ಗ್ರೆಗರಿ ಪಿರೇರಾ, ಚರ್ಚ್ ಪಾಲನಾ ಸಮಿತಿ ಮತ್ತು ಸಮಸ್ತ ಕ್ರೈಸ್ತ ಬಾಂಧವರು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಸೂರಿಕುಮೇರು ಬೊರಿಮಾರ್ ಚರ್ಚ್ ನ 126 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಿವ್ಯ ಬಲಿಪೂಜೆಯು ನಡೆದಿರುವುದಿಲ್ಲ, ಅದೇ ರೀತಿ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವವರನ್ನು ಅಭಿನಂದಿಸಲು ಭಾನುವಾರ ಸಂಜೆ 5:00 ಗಂಟೆಗೆ ಸರಿಯಾಗಿ ಚರ್ಚ್ ಗಂಟೆಯನ್ನು ಬಾರಿಸಲಾಗುತ್ತದೆ ಮತ್ತು ಮಾರ್ಚ್ 31 ರ ತನಕ ಯಾವುದೇ ಕಾರ್ಯಕ್ರಮಗಳು, ಇತರ ಚಟುವಟಿಕೆಗಳು ಚರ್ಚ್ ಆವರಣದಲ್ಲಿ ನಡೆಯುವುದಿಲ್ಲ ಎಂದು ಫಾದರ್ ಗ್ರೆಗರಿ ಪಿರೇರಾರವರು ತಿಳಿಸಿದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...