ಬಂಟ್ವಾಳ: ಮಂಗಳವಾರ ಅಗತ್ಯ ವಸ್ತುಗಳ ಖರೀದಿಸಲು ಜಿಲ್ಲಾಡಳಿತ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ತೊಂದರೆಯಾಗದೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂಬ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಅವರ ಉಪಸ್ಥಿತಿಯಲ್ಲಿ ಬಂಟ್ವಾಳ ಶಾಸಕರ ಕಚೇರಿಯಲ್ಲಿ ತಾಲೂಕು ಮಟ್ಟದ ಪ್ರಮುಖ ಅಧಿಕಾರಿಗಳ ಸಭೆ ನಡೆಸಲಾಯಿತು.
ಮಂಗಳವಾರಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ದಾಸ್ತಾನು ಮಾಡಲು ಅಂಗಡಿ ಲೈಸೆನ್ಸ್ ಇರುವ ಅಂಗಡಿ ಮಾಲಕರಿಗೆ ವಾಹನದ ಪಾಸ್ ನೀಡುವ ವ್ಯವಸ್ಥೆಯನ್ನು ಅಧಿಕಾರಿಗಳು ನೀಡಬೇಕು.
ನಾಳೆ ಅಂಗಡಿಗಳ ಮುಂಭಾಗದಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲಾ ವ್ಯವಸ್ಥೆ ಅಗಬೇಕು, ಜೊತೆಗೆ ಇದರ ಸಂಪೂರ್ಣ ಜವಬ್ದಾರಿ ಯನ್ನು ಸರಕಾರದ ಸೂಚನೆಯಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚನೆಯಾದ ಟಾಸ್ಕಪೋರ್ಸ್ ಸಮಿತಿ ಜವಬ್ದಾರಿ ವಹಸಿಬೇಕು ಎಲ್ಲವನ್ನು ಪೋಲೀಸರ ಹೆಗಲಿಗೆ ಹಾಕುವುದು ಸರಿಯಲ್ಲ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.
ಒಟ್ಟಿನಲ್ಲಿ ತಾಲೂಕಿನಲ್ಲಿ ಎಲ್ಲಿಯೂ ಅಗತ್ಯ ವಸ್ತಗಳ ಖರೀದಿ ಸಂದರ್ಭದಲ್ಲಿ ಎಡವಟ್ಟುಗಳು ಆಗಬಾರದು ಅನಿಟ್ಟಿನಲ್ಲಿ ಅಧಿಕಾರಿಗಳು ಇಂದು ಸಕಲ ವ್ಯವಸ್ಥೆ ಗಳನ್ನು ಜವಬ್ದಾರಿ ಯಿಂದ ಮಾಡಿಕೊಳ್ಳಲು ಸೂಚಿಸಿದರು.
ಅಗತ್ಯವಸ್ತುಗಳ ಖರೀದಿ ಅಲ್ಲದೆ ಸುಮ್ಮನೆ ತಿರುಗಾಟ ಮಾಡಿದರೆ ಅಂತವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲು ಪೋಲೀಸ್ ಇಲಾಖೆ ಅವರು ಸೂಚನೆ ನೀಡಿದರು.

ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಪಂ ಇಒ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಪೊಲೀಸ್ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಸರ್ಕಲ್ ಇನ್ಸ್ ಪೆಕ್ಟರ್ ಸಿ.ಡಿ. ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆಹಾರ ಇಲಾಖೆ ಅಧಿಕಾರಿ ಶ್ರೀನಿವಾಸ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿ ಸಿದ್ಧತೆ ಹಾಗೂ ಕೈಗೊಂಡ ಕ್ರಮಗಳ ಕುರಿತು ಪೂರಕ ಮಾಹಿತಿ ನೀಡಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here