Thursday, April 18, 2024

ದ.ಕ. ಜಿಲ್ಲೆಯಲ್ಲಿ ಶನಿವಾರವೂ ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ: ಸಚಿವ ಕೋಟ

ಮಂಗಳೂರು : ಕೊರೋನ ತಡೆಗಟ್ಟುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತವು ಎ.14ರವರೆಗೆ ವಿಧಿಸಿರುವ ಸೆ.144(3)ಕ್ಕೆ ಪೂರಕವಾಗಿ ಹೆಚ್ಚುವರಿ ಕೆಲವು ನಿರ್ಬಂಧವನ್ನು ವಿಧಿಸಿ ಗುರುವಾರ ಹೊರಡಿಸಿದ ಆದೇಶದಂತೆ ಜಿಲ್ಲೆಯಲ್ಲಿ ಖಾಸಗಿ ವಾಹನಗಳ ಸಂಚಾರವನ್ನು ಶನಿವಾರವೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಪಪಡಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ವೀಡಿಯೋ ಸಂದೇಶ ನೀಡಿದ ಅವರು ಶುಕ್ರವಾರದಿಂದ ಖಾಸಗಿ ವಾಹನಗಳ ಸಂಚಾರವನ್ನು ಜಿಲ್ಲಾದ್ಯಂತ ಸಂಪೂರ್ಣ ನಿಷೇಧಿಸಲಾಗಿದೆ. ಅನುಮತಿ ಇಲ್ಲದಿರುವ ಎಲ್ಲಾ ವಾಹನಗಳ ತಿರುಗಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ದಿನಸಿ ಖರೀದಿಗಾಗಿ ಮೀಸಲಿಟ್ಟಿರುವ ಬೆಳಗ್ಗೆ 7ರಿಂದ 12ರವರೆಗಿನ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ತಮ್ಮ ಮನೆ ಸಮೀಪದ ಅಂಗಡಿಗಳಿಂದ ದಿನಸಿ ಖರೀದಿ ಮಾಡಬಹುದು ಎಂದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...