ಉಳ್ಳಾಲ : ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 1ಲಕ್ಷ ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಪುರುಷೋತ್ತಮ್ ಪಿಲಾರ್ ಅವರಿಗೆ ಸೇರಿದ ವೈನ್ಸ್ ಅಂಗಡಿಯಲ್ಲಿ ಕಳವು ನಡೆದಿದೆ. ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ. ತಮ್ಮ ಕೃತ್ಯ ಹೊರಗೆ ಯಾರಿಗೂ ಕಾಣಿಸದಂತೆ ಅಂಗಡಿ ಎದುರು ಬಟ್ಟೆಯನ್ನು ಕಟ್ಟಿ ಶಟರ್ ಬಾಗಿಲನ್ನು ಮುರಿದಿದ್ದಾರೆ.

ಡಿವಿಆರ್ ನ್ನೇ ಕಳವುಗೈದರು !
ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ ಡಿವಿಆರ್ ನ್ನೂ ಕೂಡ ಕಳವು ನಡೆಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುಗಿಬಿದ್ದರು!
ಅಂಗಡಿಯ ಶಟರ್ ತೆರೆಯುವುದನ್ನು ಕಂಡ ರಸ್ತೆಯಲ್ಲಿ ಸಂಚರಿಸುವ ಮಂದಿ ವೈನ್ಸ್ ಅಂಗಡಿ ತೆರೆದಿರುವುದೆಂದು ಭಾವಿಸಿ, ಮದ್ಯ ನೀಡುವಂತೆ ಕೇಳಿಕೊಳ್ಳುತ್ತಿರುವ ದೃಶ್ಯ ಸ್ಥಳದಲ್ಲಿ ಕಂಡುು ಬಂತು. ದ್ವಿಚಕ್ರ ವಾಹನಗಳಲ್ಲಿ ಕೆಲವರು ಬಂದರೆ, ಇನ್ನು ಕೆಲವರು ಕಾರಿನಲ್ಲಿ ಬಂದು ಮದ್ಯ ಕೇಳಿ ಪೊಲೀಸರಿಂದ ಉಗಿಸಿಕೊಂಡರು.

ಪಾನ್ ಅಂಗಡಿಯಿಂದಲೂ ಕಳವು
ವೈನ್ಸ್ ಅಂಗಡಿ ಸಮೀಪದಲ್ಲೇ ಇರುವ ಪಾನ್ ಅಂಗಡಿಯಿಂದ 10 ಪ್ಯಾಕೆಟ್ ಸಿಗರೇಟುಗಳನ್ನು ಕಳ್ಳರು ಕಳವುಗೈದಿದ್ದಾರೆ. ಮೂರು ವರ್ಷದಲ್ಲಿ 10ನೇ ಬಾರಿ ಇದೇ ರೀತಿಯಲ್ಲಿ ಕಳವು ನಡೆಯುತ್ತಿದೆ ಎಂದು ಪಾನ್ ವಾಲಾ ಪೊಲೀಸರಲ್ಲಿ ಹೇಳಿಕೊಂಡಿದ್ದಾನೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here