ಬೆಂಗಳೂರು : ತಾಪಮಾನ ಹೆಚ್ಚಳ ಹಿನ್ನೆಲೆ ಏಪ್ರಿಲ್ 7 ರಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು, ಇದೇ 7 ಹಾಗೂ 8 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಏಪ್ರಿಲ್ 7 ರಂದು ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ. ಉತ್ತರ ಒಳನಾಡಿನ ಕೊಪ್ಪಳ. ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ. ದಾವಣಗೆರೆ, ಹಾಸನ, ಕೊಡಗು. ಕೋಲಾರ ಮಂಡ್ಯ ರಾಮನಗರ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ. ಹಾಗೂ ಏಪ್ರಿಲ್ 8 ರಂದು ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here