Friday, October 20, 2023

ಏ.14ರ ನಂತರವೂ ಲಾಕ್ ಡೌನ್ ಮುಂದುವರಿಯುತ್ತಾ… :ನಾಳೆ ಎಲ್ಲಾ ರಾಜ್ಯದ ಸಿ.ಎಂ. ಜೊತೆ ಚರ್ಚಿಸಿ ಪಿ.ಎಂ. ನಿರ್ಧಾರ

Must read

ನವದೆಹಲಿ : ಕೋವಿಡ್-19 ದೇಶದೆಲ್ಲೆಡೆ ವ್ಯಾಪಕವಾಗಿ ಹಬ್ಬುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಪ್ರಧಾನಿ ಮೋದಿ ಏ.14ರ ವರೆಗೆ ಲಾಕ್ ಡೌನ್ ಘೋಷಿಸಿದ್ದರು. ಲಾಕ್ ಡೌನ್ ಮುಗಿಯಲು 6 ದಿನ ಉಳಿದಿದ್ದು, ಲಾಕ್ ಡೌನ್ ನಂತರ ಮುಂದೇನು ಎಂಬ ಬಗ್ಗೆ ಚರ್ಚೆಯಾಗುತ್ತಿದೆ.
ಈ ಬಗ್ಗೆ ಪ್ರಧಾನಿ ಮೋದಿ ನಾಳೆ ಸಭೆ ಕರೆದಿದ್ದು, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧಾರ ಮಾಡಲಿದ್ದಾರೆ.

ಏ.11 ರಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಈ ವೇಳೆ, ರಾಜ್ಯಗಳಲ್ಲಿ ಎದುರಾಗಿರುವ ಕೊರೊನಾ ಸೋಂಕು ಅಂಕಿ-ಅಂಶ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ, ಏ.14ರ ಬಳಿಕವೂ ಲಾಕ್ ಡೌನ್ ಮುಂದುವರೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ. ಆ ಬಳಿಕ ಲಾಕ್ ಡೌನ್ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

ಈಗಾಗಲೇ ರಾಜನಾಥ್ ಸಿಂಗ್ ನೇತೃತ್ವದ ಕೇಂದ್ರ ಸಚಿವರ ಸಮಿತಿ ಏ.14ರ ಬಳಿಕವೂ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂಬುದಾಗಿ ಶಿಫಾರಸು ಮಾಡಿದೆ. ಇನ್ನು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಸಲಹೆ ಮೇರೆಗೆ ಪ್ರಧಾನಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆಂದು ಕಾದು ನೋಡಬೇಕಿದೆ.

More articles

Latest article