Friday, April 19, 2024

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಅಂದರ್

ಬಂಟ್ವಾಳ: ಕೈಕಂಬ ದಲ್ಲಿ ಬೀದಿಬದಿಯಲ್ಲಿ ತರಕಾರಿ ಸಂತೆ ಒರ್ವ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಹೆಚ್.ಗೌಡ.
ಕೈಕಂಬ ಶಾಂತಿ ಅಂಗಡಿ ನಿವಾಸಿ ಶಮೀರ್ ಯಾನೆ ಚಮ್ಮಿ ಬಂಧಿತ ಆರೋಪಿ.

ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ ಡೌನ್ ವೇಳೆಯಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಅಗತ್ಯ ವಸ್ತುಗಳ ಮಾರಾಟ ಮಾಡಲು ಜಿಲ್ಲಾಡಳಿತ ಅವಕಾಶ ನೀಡಿದೆ..ಅದರೆ ಇದೇ ಅವಕಾಶವನ್ನು ದುರುಪಯೋಗ ಪಡಿಸಿಕೊಂಡು ಬಳಿಕ ಪೋಲೀಸರ ಅತಿಥಿಗಳಾಗುತ್ತಿದ್ದಾರೆ‌
ಬಿಸಿರೋಡಿನ ಕೈಕಂಬ ದಲ್ಲಿ ಶಾಂತಿ ಅಂಗಡಿ ನಿವಾಸಿ ಶಮೀರ್ ಯಾನೆ ಚಮ್ಮಿ ಎಂಬಾತ ಪೋಲೀಸರ ಮಾತು ಕೇಳದೆ ವ್ಯಾಪಾರ ಕ್ಕೆ ಮುಂದಾಗಿದ್ದ.

ರಾಜ್ಯದಲ್ಲಿ ಯಾವುದೇ ಸಂತೆಗಳು ಮತ್ತು ಬೀದಿ ಬದಿಯಲ್ಲಿ ವ್ಯಾಪಾರ ವಹಿವಾಟು ಮಾಡಬಾರದು ಎಂಬ ಅದೇಶ ವಿದ್ದರು ಕೈಕಂಬ ಪ್ರದೇಶದಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೀದಿ ಬದಿಯಲ್ಲಿ ತರಕಾರಿ ರಾಶಿ ಹಾಕಿ ಮಾರಾಟ ಮಾಡುತ್ತಿದ್ದ.
ಈತನ ಈ ನಿರ್ಲಕ್ಷ್ಯ ತನದ ವ್ಯಾಪಾರದಿಂದ ಸೊಂಕು ಹರಡುವ ಲಕ್ಷಣಗಳು ಇರುವುದರಿಂದ ಈತನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...