






ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಸಜೀಪದ ಎರಡು ಗ್ರಾಮದಲ್ಲಿ ರಾಸಾಯನಿಕ ಸಿಂಪಡಣೆ ಮಾಡಿದ್ದಾರೆ ಎಂಬ ಕಾರಣಕ್ಕೆ ಸಂಘಟನೆಯ ಪ್ರಮುಖರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಗ್ರಾ.ಪಂ. ಪಿ.ಡಿ.ಒ. ಪ್ರಕಾಶ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ವಿವರ: ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಾಲೂಕಿನ ಸಜಿಪ ಮೂಡ ಮತ್ತು ಸಜಿಪ ಮುನ್ನೂರು ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಎಸ್.ಡಿ.ಪಿ.ಐ. ಪಕ್ಷದ ವತಿಯಿಂದ ರಾಸಾಯನಿಕ ಸಿಂಪಡಿಸುವ ಕಾರ್ಯ ಮಂಗಳವಾರ ನಡೆದಿತ್ತು. ಗ್ರಾಮದ ಇಂದಿರಾ ನಗರ, ಮಂಜಲ್ಪಾದೆ, ಶಾರದಾನಗರ, ಮುನ್ನೂರು, ಕೊಪ್ಪಳ ಸಹಿತ ಪ್ರಮುಖ ಸ್ಥಳಗಳಲ್ಲಿ ರಾಸಾಯನಿಕ ಸಿಂಪಡಿಸಲಾಗಿದೆ. ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸಫ್ ಆಲಡ್ ಅವರು ಈ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಗ್ರಾಮ ಪಂಚಾಯತ್ ಅನುರಹಿತವಾಗಿ ರಾಸಾಯಾನಿಕ ಸಿಂಪಡಣೆ ನಡೆದಿರುವುದು ಕಾನೂನು ಬಾಹಿರವಾಗಿದೆ ಎಂಬ ಕಾರಣಕ್ಕೆ ಪಿ.ಡಿ.ಒ ಠಾಣೆಗೆ ದೂರು ನೀಡಿದ್ದಾರೆ.





