


ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ಹೊಸದಾಗಿ 34 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ರಾಜ್ಯ ಆರೋಗ್ಯ ಇಲಾಖೆ ಮಧ್ಯಾಹ್ನದ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ಇದೆ. ಇಂದು ಹೊಸದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 34 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಲ್ಲಿರುವಂತೆ ಬೆಂಗಳೂರಿನ ನಾಲ್ವರಿಗೆ, ಬೆಳಗಾವಿಯ 17 ಜನರಿಗೆ, ಕಲಬುರ್ಗಿಯಲ್ಲಿ ಒಬ್ಬರಿಗೆ, ಮೈಸೂರಿನ ಮೂವರಿಗೆ ಹಾಗೂ ವಿಜಯಪುರದ ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ. ಇದುವರೆಗೆ ಕೊರೊನಾ ಸೋಂಕಿನಿಂದ 13 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, 82 ಕೊರೊನಾ ವೈರಸ್ ಸೋಂಕು ಪೀಡಿತರು ಗುಣಮುಖರಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ಇದೆ.






