


ಬಂಟ್ವಾಳ : ಹೊಟ್ಟೆ ನೋವು ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸಂಗಬೆಟ್ಟು ಎಂಬಲ್ಲಿ ಇಂದು ನಡೆದಿದೆ.
ಬಿಹಾರ ಮೂಲದ ಮನನ್ ಮಿಯಾ(25) ಮೃತಪಟ್ಟ ಯುವಕ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಗಾಡಿಪಲ್ಕೆ ಎಂಬಲ್ಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದ ಈ ಕೆಲಸಕ್ಕೆ ಬಂದಿದ್ದ ಮೃತಪಟ್ಟ ಯುವಕ.
ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಈತನನ್ನು ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಮೂಡಬಿದಿರೆಯ ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು. ಆದರೆ ಈತ ಹೊಟ್ಟೆನೋವು ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆಯೆ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಅದರೆ ಇದೊಂದು ಅಸಹಜ ಸಾವು ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈತನ ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.





