ಬಂಟ್ವಾಳ: ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್.ಅವರು ವಶಕ್ಕೆ ಪಡೆದುಕೊಂಡ ಘಟನೆ ಕುರ್ನಾಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸರಕಾರದ ನಿಯಮ ಮೀರಿ ಸುಮಾರು 1.30 ರ ವೇಳೆ ಕುರ್ನಾಡು ಕಡೆಯಿಂದ ಮುಡಿಪು ಕಡೆಗೆ ಅನುಮತಿ ರಹಿತವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಆರೋಪಿ ಸಹಿತ ಲಾರಿಯನ್ನು ವಶಕ್ಕೆ ಪಡೆದುಕೊಂಡು ಬಳಿಕ ಲಾರಿ ಸಹಿತ ಆರೋಪಿಯನ್ನು ಕೋಣಾಜೆ ಠಾಣೆಗೆ ವರ್ಗಾಯಿಸಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವ ವೇಳೆ ಸಾಗಾಟ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here