



ಬಂಟ್ವಾಳ: ಲಾಕ್ ಡೌನ್ ಅವಧಿಯಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ವ್ಯಾಪಾರ ಮಾಡುವ ಅಂಗಡಿಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ಅಧಿಕ ದರ ಗ್ರಾಹಕರಿಂದ ವಸೂಲಿ ಮಾಡಿದರೆ ಹುಷಾರ್, ನಿಮ್ಮ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.
ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಬರುವ ದಿನಸಿ ಅಂಗಡಿಗಳಲ್ಲಿ ಮತ್ತು ತರಕಾರಿ ಅಂಗಡಿಗಳಲ್ಲಿ ದಿನಸಿ ಸಾಮಗ್ರಿಗಳಿಗೆ ಮತ್ತು ತರಕಾರಿ ವಸ್ತುಗಳಿಗೆ ನಾನಾ ತರದ ದರಗಳನ್ನು ಸಾರ್ವಜನಿಕರಿಂದ ವಸೂಲು ಮಾಡುವ ಕುರಿತು ದೂರುಗಳು ಬಂದಿವೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ತಿಳಿಸಿದ್ದು, ಈ ಕುರಿತು ದರಪಟ್ಟಿಯನ್ನು ತರಕಾರಿ ಮತ್ತು ದಿನಸಿ ಅಂಗಡಿಗಳಲ್ಲಿ ಕಡ್ಡಾಯ ಅಳವಡಿಸಲು ಸೂಚಿಸಿದ್ದಾರೆ.
ಈ ಬಗ್ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮತ್ತು ಬಂಟ್ವಾಳ ಪುರಸಭೆಗೆ ಸೂಚನಾ ಪತ್ರವನ್ನು ಕಳುಹಿಸಲಾಗಿದ್ದು, ಪಿಡಿಒಗಳ ಮೂಲಕ ಮಾಲೀಕರಿಗೆ ಸೂಚನೆ ನೀಡುವಂತೆ ಕೋರಲಾಗಿದೆ. ದರಪಟ್ಟಿಗಳಲ್ಲಿರುವುದನ್ನು ಬಿಟ್ಟು ಹೆಚ್ಚುವರಿ ದರ ವಸೂಲು ಮಾಡುವುದು ಕಂಡುಬಂದರೆ, ಅಂಥ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ರಶ್ಮಿಎಸ್.ಆರ್. ಎಚ್ಚರಿಸಿದ್ದಾರೆ.
ಇತ್ತೀಚಿಗೆ ಶಾಸಕರ ಟಾಸ್ಕಪೋರ್ಸ್ ಸಮಿತಿ ಸಭೆಯಲ್ಲಿಯೂ ಈ ಬಗ್ಗೆ ಸಮಿತಿ ಅಧಿಕಾರಿಗಳಿಂದ ದೂರುಗಳು ಬಂದಿತ್ತು.ಅ ಸಂದರ್ಭದಲ್ಲಿ ತಹಶೀಲ್ದಾರ್ ಮೂಲಕ ಕ್ರಮಕೈಗೊಳ್ಳಲು ಸೂಚಿಸುವುದಾಗಿಯೂ ತಿಳಿಸಿದ್ದರು.
ಪ್ರಸ್ತುತ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮುಖಾಂತರ ಎಲ್ಲಾ ಅಂಗಡಿಗಳಲ್ಲಿ ದರಪಟ್ಟಿಯನ್ನು ಅಳವಡಿಸಲು ತಹಶೀಲ್ದಾರ್ ಸೂಚಿಸಿದ್ದಾರೆ.
ಒಂದು ವೇಳೆ ಅಂತಹ ದೂರುಗಳು ಮತ್ತೆ ಕೇಳಿ ಬಂದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.





