Friday, April 19, 2024

ಎರಡು ತಿಂಗಳ ಪಡಿತರ ವ್ಯವಸ್ಥೆ ಸಿ.ಎಂ.ನಿರ್ಧಾರ: ಸಚಿವ ಗೋಪಾಲಯ್ಯ

ಬಂಟ್ವಾಳ: ಎರಡು ತಿಂಗಳ ಪಡಿತರ ಕೊಡಬೇಕು ಅಂತ ಸಿಎಂ ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ನೀಡಲಾಗ್ತಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಇದೇ ಮೊದಲ ಬಾರಿಗೆ ಎರಡ ತಿಂಗಳ ಪಡಿತರವನ್ನು ಇಡೀ ರಾಜ್ಯಾದ್ಯಂತ ಶೇ 90 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಹಾರ ದಾನ್ಯಗಳ ವಿತರಣೆ ಮಾಡಲಾಗಿದೆ. ಬಿ.ಪಿ .ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ನಾಳೆಯಿಂದ ಪ್ರತಿ ತಿಂಗಳಂತೆ 3 ತಿಂಗಳು 10 ಕೆ.ಜಿ ಅಕ್ಕಿ ನೀಡಲಾಗುವುದು. ಉಜ್ವಲ ಮತ್ತು ಸಿಎಂ ಅನಿಲ ಭಾಗ್ಯ ಯೋಜನೆಯನ್ನು ಮೂರು ತಿಂಗಳಿಗೆ ವಿಸ್ತರಿಸಲಾಗುತ್ತದೆ. ಮೇ 1ರಿಂದ ಎಲ್ಲ ಪಡಿತರ ಅಂಗಡಿಗಳಲ್ಲಿ 10ಕೆಜಿ ಅಕ್ಕಿ , 1ಕೆಜಿ ತೊಗರಿ ಬೇಳೆ ವಿತರಣೆ ಮಾಡಲಾಗುತ್ತದೆ
ಬಿ‌.ಪಿ.ಎಲ್ ಕಾರ್ಡ್ ಗೆ ಅರ್ಜಿ ಹಾಕಿದವರಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನ ಮೂರು ತಿಂಗಳು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...