ಬಂಟ್ವಾಳ: ದ.ಕ. ಜಿಲ್ಲೆಯ ಉಪ್ಪಿನಂಗಡಿ ನಿವಾಸಿ ಕೊರೊನ ಸೋಂಕಿತ ವ್ಯಕ್ತಿಯ ಪತ್ನಿಗೂ ಭಾನುವಾರ ಸೋಂಕು ಇರುವುದು ದೃಢಪಟ್ಟಿದೆ.
ಭಾನುವಾರ ಒಟ್ಟು ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಒಬ್ಬರು ಬಲಿಯಾಗಿದ್ದಾರೆ.
ದೆಹಲಿಯಿಂದ ಬಂದಿದ್ದ ಉಪ್ಪಿನಂಗಡಿ ನಿವಾಸಿಗೆ ಏ.17 ರಂದು ಸೋಂಕು ದೃಢಪಟ್ಟಿದ್ದು, ಇದೀಗ ಆ ವ್ಯಕ್ತಿಯ ಪತ್ನಿಗೂ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅದರಲ್ಲಿ 12 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here